Sunday, 24th November 2024

Selection: 2024-25ನೇ ಸಾಲಿಗೆ ದೈಹಿಕ ಶಿಕ್ಷಣ ಶಿಕ್ಷಕರ ಪದಾಧಿಕಾರಿಗಳ ಆಯ್ಕೆ

ಬಾಗೇಪಲ್ಲಿ: ದೈಹಿಕ ಶಿಕ್ಷಣ ಶಿಕ್ಷಕ ವೃತ್ತಿಯು ಶಿಸ್ತು, ಸಂಯಮವನ್ನು ಕಲಿಸುವ ವೃತ್ತಿಯಾಗಿದೆ.  ದೈಹಿಕ ಶಿಕ್ಷಕರು ಪ್ರಾಥಮಿಕ ಹಂತದಿಂದ ಮಕ್ಕಳಿಗೆ ಯೋಗ, ವ್ಯಾಯಾಮ, ಪ್ರಾಣಾಯಾಮ ಅಭ್ಯಾಸ ಮಾಡಿಸಿ ವಿದ್ಯಾರ್ಥಿಗಳ ಆರೋಗ್ಯದ ಕುರಿತು ವೈದ್ಯರಂತೆ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಶಾಲೆಗೊಬ್ಬರು ದೈಹಿಕ ಶಿಕ್ಷಣ ಶಿಕ್ಷಕರನ್ನು  ನೇಮಿಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕರಾದ ರಂಗನಾಥ್ ಹೇಳಿದರು.

ಅವರು ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 2024-25 ಸಾಲಿನ ದೈಹಿಕ ಶಿಕ್ಷಣ ಶಿಕ್ಷಕರ ತಾಲ್ಲೂಕು ಸಮಿತಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದರು.  

ಬಾಗೇಪಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಸುಜಾತಾ ,ಉಪಾಧ್ಯಕ್ಷರಾಗಿ ಇನಾಯತ್ ಉಲ್ಲಾ ಖಾನ್, ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ  ಸುಭಾನ್ ಸಾಬ್ ಖಜಾಂಚಿಯಾಗಿ ಸಿ. ನಾರಾಯಣಸ್ವಾಮಿ, ಗೌರವ ಅಧ್ಯಕ್ಷರಾಗಿ ಸತ್ಯನಾರಾಯಣ,  ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಯುತ ರಾಮಾಂಜಿ  ಆಯ್ಕೆ ಆಗಿರುತ್ತಾರೆ ಎಂದು ಹೇಳಿದರು.