Saturday, 26th October 2024

ಓಲಾ, ಉಬರ್ ಆಟೋಗಳ ಪ್ರಯಾಣಕ್ಕೆ ಶೇ.5ರಷ್ಟು ಸೇವಾ ಶುಲ್ಕ ಫಿಕ್ಸ್

ಬೆಂಗಳೂರು: ಓಲಾ, ಉಬರ್ ಆಟೋಗಳ ಪ್ರಯಾಣಕ್ಕೆ ಶೇ.5ರಷ್ಟು ಸೇವಾ ಶುಲ್ಕವನ್ನು ರಾಜ್ಯ ಸರ್ಕಾರ ನಿಗದಿ ಪಡಿಸಿತ್ತು. ಆದ್ರೇ ಇದು ಕಡಿಮೆ, ಇದಕ್ಕಿಂತ ಹೆಚ್ಚು ನಿಗಧಿ ಪಡಿಸೋ ನಿಟ್ಟಿನಲ್ಲಿ, ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಕಂಪನಿಗಳು ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ರಾಜ್ಯ ಸರ್ಕಾರದಿಂದ ನವೆಂಬರ್ 22, 2022ರಂದು ಓಲಾ, ಉಬರ್ ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರವೇ ಜಿಎಸ್ಟಿ ವಿಧಿಸಿ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆಯನ್ನು ಪ್ರಶ್ನಿಸಿ ಓಲಾ ಮತ್ತು ಉಬರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು.

ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್​ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಲ್ಲದೇ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಹೀಗಾಗಿ ಓಲಾ, ಉಬರ್ ಮನಸೋಇಚ್ಛೆ ಶುಲ್ಕ ವಿಧಿಸುತ್ತಿದ್ದ ಅಗ್ರಿಗ್ರೇಟರ್​ಗಳಿಗೆ ಕಡಿವಾಣ ಬಿದ್ದಂತೆ ಆಗಿದೆ.