Sunday, 19th May 2024

ಉಡುಪಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಉಡುಪಿ: ಅಂತಿಮ ವರ್ಷದ ಕಾಲೇಜು ತರಗತಿಗಳು ಪ್ರಾರಂಭವಾಗುತ್ತಲೇ ಜಿಲ್ಲೆಯಲ್ಲಿ ಏಳು ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಮೂರು ದಿನಗಳ ಕಾಲ‌ ನಡೆದ ಕೋವಿಡ್ ಪರೀಕ್ಷೆಯಲ್ಲಿ 7 ವಿದ್ಯಾರ್ಥಿಗಳಿಗೆ ಸೋಂಕು ಧೃಢಪಟ್ಟಿದೆ. ಪದವಿ ಕಾಲೇಜು ಆರಂಭದ ಹಿನ್ನೆಲೆಯಲ್ಲಿ ನ.17ರಿಂದ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಮಣಿಪಾಲದ ಐದು ಹಾಗೂ ಕಾರ್ಕಳ ತಾಲೂಕಿನ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ಧೃಢಗೊಂಡಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಹೋಂ‌ ಐಸೋಲೇಶನ್ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು ಆರು ಸಾವಿರ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ನ.17ರಿಂದ ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭಗೊಂಡಿದ್ದವು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಉಳಿದಂತೆ, ಜಿಲ್ಲೆಯಲ್ಲಿ ಈವರೆಗೆ 22,470 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸದ್ಯ 211 ಸಕ್ರಿಯ ಪ್ರಕರಣಗಳಷ್ಟೇ ಇವೆ. ಈ ವರೆಗೆ 187 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!