Sunday, 23rd June 2024

ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ನಿಧನ

ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ್ದ ಶಾಂತವೀರ ಸ್ವಾಮೀಜಿಯವರು (80) ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿ, ಶನಿವಾರ ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದ ಸ್ವಾಮೀಜಿಯವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸ ಲಾಗಿದೆ.

ಚಿಕಿತ್ಸೆ ಫಲಕಾರಿಯಾಗದೇ, ಅವರು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. 

error: Content is protected !!