Tuesday, 10th December 2024

ಸಿಲಿಂಡರ್ ಸ್ಫೋಟ: ಬೇಕರಿಯಲ್ಲಿ ಬೆಂಕಿ ಅವಘಡ

ಶಿವಮೊಗ್ಗ: ಬೇಕರಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ.

ಇಲ್ಲಿನ ಹಣಗೆರೆ ರಸ್ತೆಯಲ್ಲಿರುವ ಎಸ್.ಎಲ್.ವಿ ಐಯ್ಯಂಗಾರ್ ಬೇಕರಿಯಲ್ಲಿ ಈ ಅವಘಡ ಸಂಭವಿಸಿದೆ. ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿವೆ. ಬೆಂಕಿ ಧಗಧಗನೆ ಹೊತ್ತಿ ಉರಿದಿದೆ.

ಬೇಕರಿಯ ಸಮೀಪವೇ ಪೆಟ್ರೋಲ್ ಬಂಕ್ ಕೂಡ ಇರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.