Thursday, 21st November 2024

ಚುನಾವಣೆ ಹಿನ್ನೆಲೆ: ಜೋಗ ಜಲಪಾತ ವೀಕ್ಷಣೆಗೆ ನಿಷೇಧ

ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ .

ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು ಕಾಯುವವರೇ ಹೆಚ್ಚು. ಮುಂದಿನ ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹುತೇಕ ಕಚೇರಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಜೆ ಘೋಷಣೆ ಮಾಡಿರುವುದರಿಂದ ಮತದಾನ ಮಾಡದೇ ಪ್ರವಾಸಿ ತಾಣಗಳಿಗೆ ಹೋಗುವವರು ಇರುತ್ತಾರೆ.

ಹಾಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಜೋಗ ಜಲಪಾತ ವೀಕ್ಷಣೆಯನ್ನು ನಿರ್ಬಂಧ ಹೇರಲಾಗಿದೆ.

ಜಿಲ್ಲೆಯ ಹೊರ ಭಾಗದಲ್ಲಿ ಜೋಗ ನಿರ್ವಾಹಣಾ ಪ್ರಾಧಿಕಾರವು ಬ್ಯಾನರ್‌ ಹಾಕುವ ಮೂಲಕ ಕಡ್ಡಾಯ ಮತದಾನ ಮಾಡುವ ಕಾರಣಕ್ಕಾಗಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಎಂಬ ಎಚ್ಚರಿಕೆ ಸಂದೇಶವನ್ನು ಪ್ರಕಟನೆ ಮೂಲಕ ತಿಳಿಸಲಾಗಿದೆ.