ಶಿವಮೊಗ್ಗ: ರಾಮಲಲ್ಲಾನ ಪ್ರಾಣಪ್ರತಿಷ್ಠೆ ಅಂಗವಾಗಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಹಿಂದೂ ಕಾರ್ಯಕರ್ತರು ಸಿಹಿ ವಿತರಣೆ ನಡೆಸುತ್ತಿದ್ದಾಗ ಮುಸ್ಲಿಂ ಮಹಿಳೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ವಾಯಿತು.
ಮುಸ್ಲಿಂ ಮಹಿಳೆಯ ಘೋಷಣೆಗೆ ಸ್ಥಳದಲ್ಲಿದ್ದ ಹಿಂದು ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದರು.
ಮಹಿಳೆಯನ್ನು ಬಂಧಿಸುವಂತೆ ಬಿಜೆಪಿ ಮುಖಂಡ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಪೊಲೀಸರನ್ನು ಆಗ್ರಹಿಸಿದರು.
ಬಳಿಕ ಪೊಲೀಸರುಮಹಿಳೆಯನ್ನು ವಶಕ್ಕೆ ಪಡೆದರು. ಆಗ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲೀಸರಿಗೆ ಆವಾಜ್ ಹಾಕಿದರು. ಬಳಿಕ ಪೊಲೀಸರು ಆಕೆಯನ್ನು ಜೀಪ್ ನಲ್ಲಿ ಕರೆದೊಯ್ದರು.