Tuesday, 10th September 2024

ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ: 7 ಜನರ ಸಾವು

ಶಿರಸಿ/ ಅಂಕೋಲಾ: ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 7 ಜನರು ಮೃತಪಟ್ಟಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಬಗ್ಗೆ ಸಂಸದ ಕಾಗೇರಿ ಮಾಹಿತಿ ನೀಡಿ ಅಂಕೊಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿ, 9 ಜನ ನಾಪತ್ತೆಯಾಗಿದ್ದರು. ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆ. ಗುಡ್ಡ ಕುಸಿತದಿಂದಾಗಿ ಶಿರಸಿ- ಕುಮಟಾ ರಸ್ತೆ ಸಂಚಾರ ಸ್ಥಗಿತವಾಗಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರಿನಿಂದಾಗಿ ಜನ ಹೈರಾಣಾಗಿದ್ದಾರೆ.

 

Leave a Reply

Your email address will not be published. Required fields are marked *