Sunday, 15th December 2024

ಸಂಸದ ಶಿವಕುಮಾರ ಉದಾಸಿ ಚುನಾವಣಾ ರಾಜಕೀಯಕ್ಕೆ ವಿದಾಯ

ಹಾವೇರಿ : ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಈಗಾಗಲೇ ಪಕ್ಷದ ನಾಯಕರಿಗೆ ತಿಳಿಸಿದ್ದೇನೆ. ವೈಯಕ್ತಿಕ ಕಾರಣದಿಂದ ರಾಜಕೀಯದಿಂದಲೇ ದೂರ ಉಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟು ವರ್ಷ ನಮ್ಮ ಉದ್ಯಮ ಸಂಸ್ಥೆಯ ವ್ಯಾವಹಾರಿಕ ಪಾಲುದಾರರು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ನಮ್ಮ ಪಾಲುದಾರ ಅನಾರೋಗ್ಯಕ್ಕೀಡಾಗಿದ್ದಾರೆ. ಸಂಸ್ಥೆಯಲ್ಲಿ ಸುಮಾರು 250 ಮಂದಿ ಉದ್ಯೋಗಿಗಳಿದ್ದಾರೆ. ಹೀಗಾಗಿ ನಾನೇ ಸಂಪೂರ್ಣ ವ್ಯವಹಾರದ ಜವಾಬ್ದಾರಿ ನೋಡಿಕೊಳ್ಳಬೇಕಾಗಿರುವುದರಿಂದ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

2009, 2014 ಮತ್ತು 2019ರ ಮೂರು ಲೋಕಸಭಾ ಚುನಾವಣೆಗಳಲ್ಲೂ ಶಿವಕುಮಾರ ಉದಾಸಿ ಅವರು ಬಿಜೆಪಿಯಿಂದ ಸ್ಪರ್ಧಿಸಿ, ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು.