Saturday, 14th December 2024

ಅನಾರೋಗ್ಯದ ಕಾರಣ ಮತದಾನ ಮಾಡಲು ಆಗಲಿಲ್ಲ: ಶಿವರಾಮ ಹೆಬ್ಬಾರ್

ಶಿರಸಿ: ಬೆಳಗ್ಗೆ ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಆಗಲಿಲ್ಲ. ವೈದ್ಯರ ಸಲಹೆಯಂತೆ ಆರುಘಂಟೆಗೆ ಬರಬೇಕಾಯ್ತು ಎಂದು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅಸಮಧಾನ ವಿದ್ದಿದ್ದರೇ ಅಡ್ಡ ಮತದಾನ ಮಾಡುವ ಅವಕಾಶ ಇತ್ತು…ಹಾಗೆ ಮಾಡಲಿಲ್ಲ. ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ ನಾನು ಯಾರಿಗೂ ಹೆದರಿ ಮತದಾನಕ್ಕೆ ಹೋಗಿಲ್ಲ ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು,ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು.. ನಾನು ಯಾರಿಗೂ ವಾರ್ನಿಂಗ್ ಕೊಡಲು ಹೋಗಿಲ್ಲ. ನನಗೆ ನನ್ನದೇ ಆದ ಅಸಮಧಾನ ಇರುವುದು ನಿಜ ಅದು ಜಿಲ್ಲಾಮಟ್ಟದಲ್ಲಿ ಅಸಮಧಾನ ಇರುವುದು.

ಕೇಂದ್ರ ಮತ್ತು ರಾಜ್ಯದ ಮುಖಂಡರ ಮೇಲೆ ಅಸಮಧಾನ ಇಲ್ಲ ಎಂದು ಸ್ಪಷ್ಟ ಪಡಿಸಿದ ಅವರು, ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ ಎಂದರು. ಯಾರು ಅಡ್ಡಗಾಲು ಹಾಕುತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ.