Tuesday, 12th November 2024

ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿದ್ದರಾಮಯ್ಯ

ಮೈಸೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದ ತಮ್ಮ ಸ್ವಂತ ಊರು ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ.

ಬಳಿಕ ಮಾತನಾಡಿ, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಾನು 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದೆ. ನಾನು ನಿವೃತ್ತಿ ಹೊಂದುವುದಿಲ್ಲ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವು ದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದೆ.