Friday, 20th September 2024

ಆರೋಪಿಯ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಬಂಧನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯ ನಗರದ ಹೊಸಪೇಟೆಯಲ್ಲಿ ಮಾತನಾಡಿ ಆರೋಪಿಯ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಆತನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.

ಆರೋಪಿಯ ಬಗ್ಗೆ ಸಿಕ್ಕಿದ್ದು ಎರಡು ಮೂರು ದಿನಗಳಲ್ಲಿ ಬಂDiಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಸಿಬಿಗೆ ವಹಿಸಿ ದ್ದೇವೆ. ಸಿಸಿಬಿ ಅವರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ಕೈಗೊಳ್ಳುತ್ತಾರೆ. ಆದ್ದರಿಂದ ಸಿಸಿಬಿಗೆ ವಹಿಸಿದ್ದೇವೆ. FSL ವರದಿ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಸಿಎಂ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯಗೆ ಸಚಿವ ನಾಗೇಂದ್ರ ಶಾಸಕ ಸಾಥ್ ನೀಡಿದರು.