Sunday, 12th January 2025

Siddarameshwar Jayanti: ಜ.14ರಂದು ಸಿದ್ದರಾಮೇಶ್ವರ ಜಯಂತಿ

ಚಿಂತಾಮಣಿ: ಬೋವಿ ಸಮುದಾಯದ ಗುರುಗಳಾದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಜನವರಿ 14ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಜೃಂಭಣೆಯಿAದ ಆಚರಿಸಲಾಗುತ್ತಿದ್ದು ಸಮು ದಾಯದ ಎಲ್ಲರೂ ಪಕ್ಷಬೇಧ ಮರೆತು ಸಮುದಾಯದ ಪ್ರತಿಯೊಬ್ಬರು ಭಾಗವಹಿಸಿ ಯಶಸ್ವಿಗೊಳಿಸ ಬೇಕೆಂದು ಬೋವಿ ಸಮುದಾಯದ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀನಿವಾಸ್ ಕೋರಿದರು.

ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ ೦೯ ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯ ಲಿದ್ದು ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ಭಾಗವಹಿಸಲಿದ್ದಾರೆ.

ಸಚಿವರಿಗೆ ಸಮುದಾಯದ ಮುಖಂಡರ ವತಿಯಿಂದ ಬೋವಿ ಭವನ,ಹಾಗೂ ಸಮುದಾಯದ ಹಲವಾರು ಬೇಡಿಕೆ ಗಳನ್ನು ಈಡೇರಿಸಲು ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಸಿದ್ದರಾಮೇಶ್ವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಅಯೋಜಿಸಿದ್ದು, ಆಹ್ವಾನಿತರು ಸೇರಿದಂತೆ ವಿದ್ಯಾರ್ಥಿಗಳು ತಮ್ಮ ಪಾಲಕರೊಂದಿಗೆ ಆಗಮಿಸಬೇಕೆಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬೋವಿ ಸಂಘದ ಜಿಲ್ಲಾಧ್ಯಕ್ಷರಾದ ಎಂ ಗುರ್ರಪ್ಪ,ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀನಿವಾಸ್, ದ್ಯಾವಪ್ಪ, ವೆಂಕಟರವಣಪ್ಪ, ಕೆಇಬಿ ಮಂಜುನಾಥ, ಮಣಿ, ಸೀತಾರಾಂಪುರ ಎಸ್ ಪಿ ಜಯರಾಮ್,ಕೆ ವಿ ರಾಮಪ್ಪ, ಹನುಮಂತಪ್ಪ, ಲಕ್ಷ್ಮೀನಾರಾಯಣ್, ವೆಂಕಟರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ: Chikkamagaluru News

Leave a Reply

Your email address will not be published. Required fields are marked *