ಬೆಂಗಳೂರು: ಗಾಯಕಿ ಮಂಗ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಅವರು ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ. ರಂಗಾ ರೆಡ್ಡಿ ಜಿಲ್ಲೆಯ ನಂದಿಗಾಮ ಮಂಡಲದ ಕನ್ಹಾ ಶಾಂತಿ ವನಂನಲ್ಲಿ ನಡೆದ ವಿಶ್ವ ಆಧ್ಯಾತ್ಮಿಕ ಮಹೋತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ನಂತರ ಅವರು ಮನೆಗೆ ತೆರಳುತ್ತಿದ್ದ ವೇಳೆ, ಹಿಂದಿನಿಂದ ಬಂದ ಕಾರೊಂದು ಮಂಗ್ಲಿ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಮಂಗ್ಲಿ ಅವರ ಜೊತೆಗೆ ಮನೋಹರ್, ಮೇಘರಾಜ್ ಎಂಬುವರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.