Sunday, 15th December 2024

ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಸಾವು

ಶಿರಸಿ: ತಾಲೂಕಿನ ಬಂಡಲ ಸಮೀಪದ ಪೆಟ್ರೋಲ್ ಪಂಪ್ ಎದುರು ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ತಮಿಳುನಾಡು ಮೂಲದ ಮೂವರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಇನ್ನು ವ್ಯಕ್ತಿ ಯೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.