Friday, 13th December 2024

ಕರಡಿ ದಾಳಿಯಿಂದ ಓರ್ವ ರೈತನ ಸಾವು

ಶಿರಸಿ: ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ.

ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಗುರುವಾರ ಈತ ಕೆಲಸ ಕ್ಕಾಗಿ ಗದ್ದೆಗೆ ಹೋಗಿದ್ದ. ಆದರೆ ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ ಮೃತಪಟ್ಟು ಬಿದ್ದಿರುವುದು ಕಂಡು ಬಂದಿದೆ.

ಕರಡಿ ದಾಳಿಯಿಂದ ಮೃತಪಟ್ಟ ಘಟನೆ ಅರಿವಾದ ತಕ್ಷಣವೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಕುಟುಂಬಸ್ಥರು, ಗ್ರಾಮಸ್ಥರು, ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.