Thursday, 12th December 2024

ಮಾನವ ಹಕ್ಕುಗಳ ಆಯೋಗ: ಫೆ.13ರಂದು ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ 

ತುಮಕೂರು: ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 13, 2024ರಂದು ತುಮಕೂರು ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿದೆ.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲೆಗೆ ಸಂಬAಧಿಸಿದAತೆ ಆಯೋಗದಲ್ಲಿ ನೋಂದಣಿ ಯಾಗಿರುವ ಪ್ರಕರಣಗಳನ್ನು ನಗರದ ಬಾಲಭವನದಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದ್ದು, ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಕೊಳ್ಳಬಹುದಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬAಧಿಸಿದAತೆ ತುಮಕೂರು ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿಯೇ ಸಾರ್ವಜನಿಕರಿಂದ ದೂರುಗಳು, ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಫೆಬ್ರವರಿ 13 ರಂದು ನಗರದ ಬಾಲಭವನದಲ್ಲಿ ಆಯೋಗದ ಅಧ್ಯಕ್ಷರಾದ ಜಸ್ಟಿಸ್ ಎಲ್.ನಾರಾಯಣಸ್ವಾಮಿ ಹಾಗೂ ಸದಸ್ಯರುಗಳಾದ ಎಸ್.ಕೆ.ವಂಟಿಗೋಡಿ ಮತ್ತು ಟಿ. ಶಾಮ್‌ಭಟ್ ಅವರನ್ನು ಸಂಪರ್ಕಿಸಿ ದೂರುಗಳನ್ನು ಸಲ್ಲಿಸಬಹುದೆಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.