Wednesday, 11th December 2024

ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿವೀಕ್ಷಿಸಿದ ಜಿಲ್ಲಾಧಿಕಾರಿ 

ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಜನವರಿ 2024ರೊಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಜನವರಿ 2024ರೊಳಗಾಗಿ ಸಂಪೂರ್ಣವಾಗಿ ಎಲ್ಲಾ ರೀತಿಯಲ್ಲಿ ಪೂರ್ಣಗೊಳಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು.
ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಅಮಾನಿಕೆರೆಯ ಗಾಜಿನ ಮನೆ ಆವರಣದ ಸುತ್ತಮುತ್ತಲಿನ ಖಾಲಿ ಪ್ರದೇಶವನ್ನು ಅಭಿವೃದ್ದಿ ಪಡಿಸುವ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು, ಇದನ್ನೂ ಸಹ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ತದನಂತರ, ಗಂಗಸಂದ್ರ ಕೆರೆಯಲ್ಲಿನ ಆವರಣದಲ್ಲಿ ಉದ್ಯಾನವನ ನಿರ್ಮಾಣ ಮಾಡಲು ಕಾಮಗಾರಿಯನ್ನೂ ಸಹ ಕೈಗೊಂಡಿದ್ದು, ಇದನ್ನೂ ಸಹ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಈ ಸಂದರ್ಭ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಬಿ.ವಿ.ಅಶ್ವಿಜ, ಮುಂತಾದ ಅಧಿಕಾರಿಗಳು ಉಪಸ್ಥಿತ ರಿದ್ದರು.