ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಸುಖಾಸುಮ್ಮನೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದ್ದು, ಅಂತಹವರಿಗೆ ಎಚ್ಚರಿಕೆ ನೀಡಿದೆ.
ಸಾಮಾಜಿಕ ಜಾಲತಾಣಗಳನ್ನು ಜನ ಸ್ನೇಹಿಯಾಗಿ ಬಳಕೆ ಮಾಡಿಕೊಳ್ಳಬೇಕು .ನೈಜ ಸುದ್ದಿಗಳನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪ್ರಚೋದನಾಕಾರಿಯಾಗಿ ಸಾಮಾಜಿಕ ಸಾಮರಸ್ಯ ಕದಡುವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕರಿಗೆ ಎಚ್ಚರಿಸಿದ್ದು ಸುಳ್ಳು ಸುದ್ದಿ ಹರಡದಂತೆ ಎಚ್ಚರ ವಹಿಸಿ ಎಂದು ಅರಿವು ಮೂಡಿಸಲಾಗಿದೆ.