Wednesday, 11th December 2024

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮಾಜಿ ಶಾಸಕ ಮೊಯಿದೀನ್ ಬಾವ ನೇತೃತ್ವದಲ್ಲಿ ಮನವಿ

ಉಡುಪಿ: ಜಿಲ್ಲೆಯ ಪ್ರವಾಸದಲ್ಲಿರುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕಳೆದ ತಿಂಗಳು ಮಂಗಳೂರು ನಗರ ಉತ್ತರ ಕ್ಷೇತ್ರದ ಸುರತ್ಕಲ್ ವಿದ್ಯಾದಾ ಯಿನಿ ಶಾಲೆಯ 4 ವಿದ್ಯಾರ್ಥಿಗಳು ಪೂರ್ವಭಾವಿ ಪರೀಕ್ಷೆ ನಂತರ ನದಿಗೆ ಈಜಲು ತೆರಳಿದ ಸಂದರ್ಭ ದಲ್ಲಿ ಮೃತಪಟ್ಟಿದ್ದು, ಈ ಕುರಿತು ಮೃತ ವಿದ್ಯಾರ್ಥಿಗಳ ಪೋಷಕರ ಜೊತೆಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಕೂಡಲೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮಾಜಿ ಶಾಸಕ ಮೊಯಿದೀನ್ ಬಾವ ಅವರ ನೇತೃತ್ವದಲ್ಲಿ ಮನವಿ ಮಾಡಲಾಯಿತು.

ಈ ಬಗ್ಗೆ ಮೃತ ದೇಹವನ್ನು ಇರಿಸಿದ್ದ ಆಸ್ಪತ್ರೆಗೆ ತೆರಳಿ ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಷಯ ತಿಳಿಸಿ ಕೂಡಲೇ ಪರಿಹಾರ ನೀಡುವಂತೆ ಕೋರಿದ್ದೇನು. ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿ ಅವರಿಗೆ ವರದಿ ನೀಡುವಂತೆ ಸೂಚಿಸಿದ್ದರು ಹಾಗೂ ವಿದ್ಯಾರ್ಥಿಗಳ ಪೋಷಕರ ಜೊತೆ ಜಿಲ್ಲಾಧಿಕಾರಿ ಅವರಿಗೆ ಸಹ ಅಂದೇ ಭೇಟಿಯಾಗಿ ಮನವಿ ಮಾಡಲಾಗಿತ್ತು ಹಾಗೂ ಈಗಾಗಲೇ ಗೌರವಾನ್ವಿತ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿಯನ್ನು ಸಹ ಸಲ್ಲಿಸಿದ್ದಾರೆ.