Wednesday, 11th December 2024

ತೃತೀಯ ಲಿಂಗಿಗಳ ಮಕ್ಕಳಿಗೆ ಪ್ರವೇಶಾತಿ ಶುಲ್ಕ ವಿನಾಯಿತಿ: ಶ್ರೀ ಕೃಷ್ಣದೇವರಾಯ ವಿವಿ ಕುಲಸಚಿವ

ಬಳ್ಳಾರಿ: ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಅವರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮುಂದಾಗಿದೆ.

ಸಮಾಜದಲ್ಲಿ ತೃತೀಯ ಲಿಂಗಿಗಳು ಗೌರವದ ಜೀವನ ನಡೆಸಲು ಸರಿಯಾದ ಸೌಕರ್ಯ ಸಿಗುತ್ತಿಲ್ಲ, ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಮನಗಂಡು ವಿವಿ ಆಡಳಿತವರ್ಗ ಮುಂದಿನ ಶೈಕ್ಷಣಿಕ ವರ್ಷದಿಂದ ಅವರಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿದೆ.

ರಾಜ್ಯದಲ್ಲಿ ಸುಮಾರು 46 ಸಾವಿರ ಮಾಜಿ ದೇವದಾಸಿಯರಿದ್ದಾರೆ ಎಂದು ಅಂದಾಜಿಸಲಾಗಿದೆ. ಅವಳಿ ಜಿಲ್ಲೆಯಲ್ಲೇ 15 ಸಾವಿರ ಮಾಜಿ ದೇವದಾಸಿಯ ರಿದ್ದು, ಸಾವಿರಕ್ಕೂ ಹೆಚ್ಚು ದೇವದಾಸಿಯರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ಕುಲಸಚಿವ ಎಸ್.ಎನ್‍.ರುದ್ರೇಶ್ ಮಾತನಾಡಿ, “2010ರಲ್ಲಿ ವಿಎಸ್‌ಕೆ ವಿವಿ ಆರಂಭಗೊಡಿದ್ದು, ಒಟ್ಟು 27 ವಿಭಾಗಗಳ ಪೈಕಿ 13 ವಿಭಾಗಗಳನ್ನು ತೆರೆಯ ಲಾಗಿದೆ. ನಾಲ್ಕು ಸ್ನಾತಕೋತ್ತರ ಕೇಂದ್ರಗಳು ಸೇರಿದಂತೆ ಒಟ್ಟು 2884 ವಿದ್ಯಾರ್ಥಿಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ನ.8ರಂದು ನಡೆದ ಸಾಮಾನ್ಯ ಸಿಂಡಿಕೇಟ್ ಸಭೆಯಲ್ಲಿ ತೃತೀಯ ಲಿಂಗಿಗಳಿಗೆ ಹಾಗೂ ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅವರಿಗೆ ಪ್ರವೇಶಾತಿ ಶುಲ್ಕ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ