ಗುಬ್ಬಿ : ಎಸ್ಆರ್ ಶ್ರೀನಿವಾಸ್ ರವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಿಂದ ಗತಕಾಲದ ಇತಿಹಾಸ ತಾಲೂಕಿನಲ್ಲಿ ಮರುಗಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು ವರ್ಷಗಳ ಕಾಲದಿಂದಲೂ ತಾಲೂಕಿನ ಜನತೆಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದು ಕನಸಾಗಿತ್ತು ಅದಕ್ಕೆ ಪೂರಕ ವಾಗಿ ಎಸ್ಆರ್ ಶ್ರೀನಿವಾಸ್ ರವರು ಕಾಂಗ್ರೆಸ್ ಸೇರ್ಪಡೆಗೊಂಡು ಗತಕಾಲದ ಇತಿಹಾಸವನ್ನು ಮರುಗಳಿಸಲಿದೆ ಅನೇಕ ಕಾರ್ಯಕರ್ತರು ಪ್ರಾಮಾಣಿಕವಾಗಿ ಪಕ್ಷವನ್ನು ಕಟ್ಟುವ ಮೂಲಕ ಶ್ರಮಿಸಿದ್ದಾರೆ. ಯಾವುದೇ ಗೊಂದಲ ವಿಲ್ಲದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಮಾಜಿ ಸಚಿವ ಎಸ್ಆರ್ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸಲು ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಜವಾಬ್ದಾರಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರು ಗಳಿಗೆ ಧನ್ಯವಾದಗಳು ತಿಳಿಸುತ್ತೇನೆ.
ನಾನು ಯಾವುದೇ ಪಕ್ಷದಲ್ಲಿ ಇದ್ದರೂ ಪಕ್ಷ ಸಿದ್ದಾಂತ ಮತ್ತು ನಿಷ್ಠೆಯಿಂದ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಆ ಒಂದು ನಂಬಿಕೆ ಹಿನ್ನೆಲೆಯಿಂದ
ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ಲಭಿಸಿದೆ ಇಷ್ಟು ವರ್ಷಗಳ ಪ್ರಾಮಾಣಿಕವಾಗಿ ದುಡಿದಂತ ಯಾವೊಬ್ಬ ಕಾರ್ಯಕರ್ತರನ್ನು ಸಹ ಕಡೆಗಣಿಸದೆ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ, ಶಶಿ ಹುಲಿಕುಂಟೆ, ತಾಲೂಕು ಅಧ್ಯಕ್ಷ ನರಸಿಂಹಯ್ಯ, ಶಂಕರಾ ನಂದ್, ನಿಂಬೆಕಟ್ಟೆ ಜಯಣ್ಣ, ಮಹಮ್ಮದ್ ಸಾಧಿಕ್, ಸೌಭಾಗ್ಯಮ್ಮ, ಮಂಜುನಾಥ್, ತಾಲೂಕಿನ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.