ದಾವಣಗೆರೆ: ತಾಲ್ಲೂಕಿನ ಪ್ರಮುಖ ಕೆರೆಗಳಲ್ಲಿ ಒಂದಾಗಿರುವ ಹದಡಿ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಮಂಗಳ ವಾರ ಸಂಬಂಧಪಟ್ಟ ಇಲಾಖೆ ಅಧಿಕಾರಿ ಗಳೊಂದಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಕಳೆದ ೬ ತಿಂಗಳ ಹಿಂದೆ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡ ವೇಳೆ ತಾತ್ಕಾಲಿಕವಾಗಿ ದುರಸ್ಥಿ ಪಡಿಸಲಾಗಿತ್ತು. ಆದರೆ ಹೆಚ್ಚಿನ ಮಳೆ ಆಗಿ ಕೆರೆಯಲ್ಲಿ ನೀರು ಶೇಖರಣೆ ಹೆಚ್ಚುವರಿಯಾಗಿರುವುದರಿಂದ ಇದೀಗ ಮತ್ತೆ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆರೆ ಏರಿ ದುರಸ್ಥಿಗಾಗಿ ನೀರಾವರಿ ಇಲಾಖೆಯಿಂದ ೧.೭೦ ಕೋಟಿ ರು., ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸುವಂತೆ ಸೂಚಿಸಲಾಗಿದೆ. ದುರಸ್ತಿ ಮುಗಿಯುವವರೆಗೆ ಕೆರೆ ಏರಿ ಮೇಲೆ ಭಾರಿ ವಾಹನಗಳನ್ನು ನಿಷೇಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಲೊಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನರೇಂದ್ರಬಾಬು, ಸಹಾಯಕ ಅಭಿಯಂತರ ವೀರಪ್ಪ ಮತ್ತಿತರರಿದ್ದರು.