Saturday, 27th July 2024

ವಿದ್ಯಾರ್ಥಿಗಳ ಪ್ರತಿಭಟನೆ ನಡುವೆ ಪಿಯು ಕಾಲೇಜಿನಲ್ಲಿ ಕಲ್ಲುತೂರಾಟ

ಬಾಗಲಕೋಟೆ: ಹಿಜಾಬ್ V/s ಕೇಸರಿ ಶಾಲು ವಿವಾದ ಕ್ರಮೇಣವಾಗಿ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದೆ. ಬಾಗಲ ಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ ನಡೆದಿದೆ.

ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿರುವ ಪದವಿ ಪೂರ್ವ ಕಾಲೇಜಿನ ಎದುರಿನಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ಕೇಸರಿ ಶಾಲುಗಳನ್ನು ಹಾಕಿಕೊಂಡು ಬಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಕೆಲವು ಕಿಡಿಗೇಡಿಗಳು ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾರೆ. ಹಿಜಾಬ್ ಧರಿಸಿ ಬಂದಿರುವ ವಿದ್ಯಾರ್ಥಿನಿ ಯರಿಗೆ ಪೋಷಕರು ಸಾಥ್ ನೀಡಿದ್ದಾರೆ.

ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ಬಿಸಿ ಇನ್ನೂ ಹೆಚ್ಚಾಗಿದೆ. ಇದರ ನಡುವೆ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಮಂಗಳವಾರ ಹೈಕೋರ್ಟ್ ವಿಚಾರಣೆ ನಡೆಸಲಿದೆ.

ಮಂಡ್ಯ ವಿಶ್ವವಿದ್ಯಾಲಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಘೋಷಣೆ ಕೂಗಿದರು. ಕಳೆದ ಒಂದು ವಾರದಿಂದ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಹೇಳಿರುವ ಅವರು, ಹುಡುಗಿಯರು ಹಿಜಾಬ್ ಅನ್ನು ದೂರವಿಡುವವ ರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದರು.

error: Content is protected !!