Thursday, 12th December 2024

ಗ್ರಾಮೀಣ ಅಂಚೆ ನೌಕರರ ಅನಿರ್ಧಿಷ್ಠಾವಧಿ ಮುಷ್ಕರ

ತುಮಕೂರು: ಜಿಲ್ಲಾ ಪ್ರಧಾನ ಅಂಚೆ ಕಚೇರಿ ಮುಂಭಾಗ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಜಿಡಿಎಸ್‌ಯು ಮತ್ತು ಎನ್‌ಯುಜಿಡಿಎಸ್ ನೇತೃತ್ವ ದಲ್ಲಿ ಗ್ರಾಮೀಣ ಅಂಚೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಗ್ರಾಮೀಣ ಅಂಚೆ ನೌಕರರ ಸಮಸ್ಯೆ ಆಲಿಸಿ ಮಾತನಾಡಿದ ಸರ್ಕಲ್ ಸೆಕ್ರೆಟರಿ ಖಂಡೋಜಿರಾವ್ ಮಾತನಾಡಿ, ಅಂಚೆ ನೌಕರರ ಹೋರಾಟಕ್ಕೆ ಸದಾ ಬೆಂಬಲವಾಗಿರುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ತುಮಕೂರು ವಿಭಾಗೀಯ ಕಾರ್ಯದರ್ಶಿ ಕೆ.ಶ್ರೀನಿವಾಸ್, ಗ್ರಾಮೀಣ ಅಂಚೆ ನೌಕರರು ಪಾಲ್ಗೊಂಡಿದ್ದರು.