Sunday, 28th April 2024

ವಿದ್ಯುತ್ ಅವಘಡದಿಂದ ವಿದ್ಯಾರ್ಥಿ ಸಾವು: ಸಾಂತ್ವನ ಹೇಳಿದ ಶಿಕ್ಷಣ ಸಚಿವ

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ದಿನ ನಡೆದ ಧ್ವಜಸ್ತಂಭ ಅವಘಡ ಪ್ರಕರಣದ ಮೃತ ವಿದ್ಯಾರ್ಥಿ ಚಂದನ್ ಮನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು.

ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವ ಬಿ.ಸಿ.ನಾಗೇಶ್, ಶಿಕ್ಷಣ ಇಲಾಖೆವತಿಯಿಂದ ಒಂದು ಲಕ್ಷ ರೂ ಪರಿಹಾರ ಚೆಕ್ ವಿತರಿಸಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಇನ್ನೂ ಹೆಚ್ಚಿನ ಪರಿಹಾರ ಕೊಡಿಸುವ ಭರವಸೆ ನೀಡಿದರು.

ತುಮಕೂರು ತಾಲೂಕಿನ ಕರೀಕೆರೆ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿತ್ತು. ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದರು.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!