Saturday, 27th July 2024

ಬೆಳಗಾವಿಯಲ್ಲಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ

ಬೆಳಗಾವಿ: ರಾಜ್ಯಾದ್ಯಂತ ಶುಕ್ರವಾರ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ತರಗತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ್ದಾರೆ.

ಬೆಳಗಾವಿಯ ಸರ್ದಾರ ಸರ್ಕಾರಿ ಶಾಲೆಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ರೀತಿಯ ಸುರಕ್ಷಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ತರಗತಿಗಳಲ್ಲಿಯೂ ಶಾಲಾ ಸಿಬ್ಬಂದಿ ಸ್ಯಾನಿಟೈಸೇಷನ್ ಮಾಡಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಂದು ತರಗತಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 2381, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 3166 ಶಾಲೆಗಳು ಪುನರ್ ಆರಂಭ ವಾಗಿವೆ. ಎರಡೂ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 8 ಲಕ್ಷ 93 ಸಾವಿರ 653 ವಿದ್ಯಾರ್ಥಿಗಳಿದ್ದಾರೆ.

ಶಾಲೆಗೆ ಆಗಮಿಸುವ ಶಿಕ್ಷಕರಿಗೂ ಕಡ್ಡಾಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳ ಆರೋಗ್ಯದ ಕಡೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!