ಬೆಂಗಳೂರು: ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ (Subrahmanyaa Movie) ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.
ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ ಶೇ.60 ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲೀಸ್ ಸ್ಟುಡಿಯೊದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೊಗಳಲ್ಲಿ ಗ್ರಾಫಿಕ್ಸ್ ಕೆಲಸಗಳು ನಡೆಯುತ್ತಿವೆ.
‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್ ಅವರು, ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್ ಕ್ಯಾಪ್ ಧರಿಸಿದ್ದಾರೆ.
ಇದನ್ನೂ ಓದಿ | Actress Sara Ali Khan: ಸಾರಾ ಅಲಿಖಾನ್ ಫಿಟ್‌ನೆಸ್‌ಗೆ ಫ್ಯಾನ್ಸ್ ಫಿದಾ! ವಿಡಿಯೊ ನೋಡಿ
ಸಕ್ಕತ್ ಸ್ಟುಡಿಯೊದ ಚೊಚ್ಚಲ ಕಾಣಿಕೆ ‘ಮರ್ಯಾದೆ ಪ್ರಶ್ನೆ’ ಶೀಘ್ರದಲ್ಲೇ ತೆರೆಗೆ
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ ‘ಮರ್ಯಾದೆ ಪ್ರಶ್ನೆ’ (Maryade Prashne) ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು. ಸಾಕಷ್ಟು ಸಿನಿಮೋತ್ಸಾಹವಿರುವ ಆರ್‌ಜೆ ಪ್ರದೀಪ್ ಅವರು ತಮ್ಮದೇ ಸಕ್ಕತ್ ಸ್ಟುಡಿಯೊ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೊ, ಈ ಹಿಂದೆ ವೆಬ್‌ಸಿರೀಸ್ ಗಮನ ಸೆಳೆದಿದ್ದ ಈ ನಿರ್ಮಾಣ ಸಂಸ್ಥೆ ಈಗ ಸಿನಿರಂಗಕ್ಕೂ ಹೆಜ್ಜೆ ಇಟ್ಟಿದೆ.
ಸಕ್ಕತ್ ಸ್ಟುಡಿಯೋ ಸಖತ್ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಚಿತ್ರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆರ್‌ಸಿಬಿ ಕಪ್ ಗೆಲ್ಲಬೇಕು ಅಂತ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ರ‍್ಯಾಪರ್ ಆಲ್ ಓಕೆ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಡಿಸಿತ್ತು. ಹೀಗೆ ಆರಂಭದಿಂದಲೂ ಬಗೆ ಬಗೆಯಲ್ಲಿ ಪ್ರಚಾರ ಮಾಡುತ್ತಿರುವ ಚಿತ್ರತಂಡ ಗೌರಿ ಗಣೇಶ ಹಬ್ಬದ ದಿನವಾದ ಇಂದು ಥ್ರಿಲ್ಲಿಂಗ್ ಅಪ್ ಡೇಟ್ ಕೊಟ್ಟಿದೆ.
ಮರ್ಯಾದೆ ಪ್ರಶ್ನೆ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ವಿಘ್ನ ವಿಪತ್ತುಗಳಿಲ್ಲದೆ ನಿಮ್ಮೆಲ್ಲರನ್ನು ತಲುಪುತ್ತೇವೆ ಅತಿ ಶೀಘ್ರದಲ್ಲೇ. ಹಬ್ಬ ಮಾಡೋಣ ರೆಡಿ ಇರಿ, ಇದು ಮರ್ಯಾದೆ ಪ್ರಶ್ನೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಪ್ರತಿಭಾನ್ವಿತರ ದಂಡೇ ಚಿತ್ರದಲ್ಲಿದ್ದು, ಭಿನ್ನ ಪಾತ್ರಗಳಿಗೆ ಹಲವರು ಬಣ್ಣ ಹಚ್ಚಿದ್ದಾರೆ. ರಾಕೇಶ್ ಅಡಿಗ, ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್ ಅವರೇ ಕಥೆ ಬರೆದಿದ್ದಾರೆ.
ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ ಪ್ರದೀಪ್.
ಮರ್ಯಾದೆ ಪ್ರಶ್ನೆ ಚಿತ್ರವನ್ನು ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮೆರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ.