Friday, 13th December 2024

Suicide: ನವ ವಿವಾಹಿತ ನೇಣಿಗೆ ಶರಣು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬರದಲೇಪಾಳ್ಯದಲ್ಲಿ ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುನಾಥ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ತಮ್ಮ ಹಳೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ರೂಮಿನ ತೀರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮಂಜುನಾಥ ಆರು ತಿಂಗಳ ಹಿಂದೆ ಹತ್ತಿರದ ಸಂಬಂಧಿ ಚೈತ್ರ ಎಂಬವರೊಟ್ಟಿಗೆ ಮದುವೆಯಾಗಿದ್ದ ಎಂದು ಹೇಳಲಾಗಿದೆ. ಕಳೆದ 20 ದಿನಗಳ ಹಿಂದೆ ಹೊಸ ಮನೆಯ ಗೃಹಪ್ರವೇಶ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಜೀವನದ ಗೆಲುವಿಗೆ ನಾಲ್ಕು ದಿನ, ನಾಲ್ಕು ಸೂತ್ರ