Saturday, 14th December 2024

ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಷ್​

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಮತ್ತು ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಅಂಬರೀಷ್​ ಅವರು ಘೋಷಣೆ ಮಾಡಿದ್ದಾರೆ.

ಮಂಡ್ಯದಲ್ಲಿ ಬುಧವಾರ ನಡೆದ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಸಮಲತಾ ಅಂಬರೀಷ್​ ಈ ಮಹತ್ವದ ಘೋಷಣೆ ಮಾಡಿದರು.

ಪಕ್ಷೇತರ ಸಂಸದೆಯಾದರೂ 4 ಸಾವಿರ ಕೋಟಿ ಅನುದಾನ ಕೊಟ್ಟಿದ್ದು ಬಿಜೆಪಿ. ಪ್ರತಿ ವಿಷಯದಲ್ಲೂ ನನ್ನನ್ನು ವಿಶ್ವಾಸಕ್ಕೆ ಪಡೆದರು. ನಿಮ್ಮ ನಾಯಕತ್ವ ಬೇಕು ಎಂದು ಸ್ವತಃ ಪ್ರಧಾನಿ ನನಗೆ ಹೇಳಿದ್ರು. ನಾಯಕತ್ವ ಬೆಳೆಸುವ ಗುಣ ಬಿಜೆಪಿಯಲ್ಲಿದೆ. ಭಾರತವನ್ನು ಇಡೀ ಪ್ರಪಂಚ ತಿರುಗಿ ನೋಡುವಂತೆ ಮೋದಿ ಮಾಡಿದ್ದಾರೆ. ಮೋದಿ ಅವರದ್ದು ಅಭಿವೃದ್ಧಿ ಮಂತ್ರ. ಒಂದೆ ಒಂದು ಕಳಂಕ ಅವರ ಮೇಲಿಲ್ಲ. ಅವರ ನಾಯಕತ್ವದಲ್ಲಿ ಮುನ್ನಡೆಯುತ್ತೇನೆ. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡು ತ್ತಿಲ್ಲ. ಆದರೆ ಮಂಡ್ಯವನ್ನ ಬಿಡುವ ಪ್ರಶ್ನೆ ಇಲ್ಲ ಎಂದು ಸುಮಲತಾ ಅವರು ಹೇಳಿದರು.