ಗುಬ್ಬಿ : ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ಶ್ರೀ ತುಳಸಿರಂಗನಾಥಸ್ವಾಮಿಯ ಸೂರ್ಯ ಮಂಡಲ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ವಿಶೇಷ ಹೂವಿನ ಅಲಂಕಾರ ಕುಂಕುಮಾರ್ಚನೆ ಸಹಸ್ರನಾಮ ಅರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿಸಲಾಯಿತು. ತಾಲೂಕಿನ ಹಲವು ಕಡೆಯಿಂದ ಭಕ್ತಾದಿಗಳು ಬಂದು ತಮ್ಮ ಹರಕೆಯನ್ನ ತೀರಿಸಿಕೊಂಡರು.
ಜಾತ್ರೆಯ ಹಿನ್ನೆಲೆಯಲ್ಲಿ ದಾಸೋಹ ಏರ್ಪಡಿಸಲಾಗಿತ್ತು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭರತನಾಟ್ಯ, ಜಾನಪದ, ಚಲನಚಿತ್ರ ಹಾಡುಗಳಿಗೆ ನೃತ್ಯ ಮಾಡುವ ಮೂಲಕ ರಂಜಿಸಿದರು. ಸಾವಿರಾರು ಭಕ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.