Wednesday, 11th December 2024

ಜೆಡಿಎಸ್’ನ ಸ್ವರೂಪ್ ಗೆ ಹಾಸನ ಟಿಕೆಟ್

ಬೆಂಗಳೂರು: ಹಾಸನ ಕ್ಷೇತ್ರದ ಟಿಕೆಟ್ ಕೊನೆಗೂ ಜೆಡಿಎಸ್ ಪಕ್ಷದ ನಿಷ್ಠಾವಂತ ಪ್ರಬಲ ಆಕಾಂಕ್ಷಿಯಾಗಿದ್ದ ಸ್ವರೂಪ್ ಗೆ ಘೋಷಣೆ ಮಾಡಲಾಗಿದೆ.

ಬೆಂಗಳೂರಿನ ಜೆಡಿಎಸ್ ಪಕ್ಷದ ಅಧಿಕೃತ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಹಾಸನ ಕ್ಷೇತ್ರದ ಅಭ್ಯರ್ಥಿಯಾಗಿ ಸ್ವರೂಪ್ ಗೆ ಟಿಕೆಟ್ ನೀಡುತ್ತಿರುವುದಾಗಿ ಘೋಷಣೆ ಮಾಡಿದರು.

ಇದಕ್ಕೂ ಮುನ್ನ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಹೆಚ್ ಡಿಕೆ ಕೆಲ ಕಾಲ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಬಳಿಕ ಅಂತಿಮವಾಗಿ ಹಾಸನ ಕ್ಷೇತ್ರಕ್ಕೆ ಟಿಕೆಟ್ ಅನ್ನು ಸ್ವರೂಪ್ ಗೆ ನೀಡುವುದಾಗಿ ಸುದ್ದಿಗೋಷ್ಠಿಯಲ್ಲೇ ಘೋಷಿಸಿದ್ದಾರೆ.