ಹುಬ್ಬಳ್ಳಿ: ದನದ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಮೂರು ಹಸುಗಳು ಸಜೀವವಾಗಿ ದಹನಗೊಂಡ ಘಟನೆ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ನೀಲಕಂಠಗೌಡ ಪಾಟೀಲ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದ ರಿಂದ 3 ಹಸುಗಳ ಸಜೀವ ದಹನವಾಗಿವೆ. ಗ್ರಾಮದ ಹೊರವಲಯದಲ್ಲಿರುವ ಕೊಟ್ಟಿಗೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕೊಂಡು ಕೊಟ್ಟಿಗೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಹಸುಗಳು ಸೇರಿದಂತೆ ಲಕ್ಷಾಂತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
