Thursday, 12th December 2024

ಆ.೨೬ರಂದು ತುಮಕೂರಿನಲ್ಲಿ ತಿಗಳ ಕ್ಷತ್ರಿಯ ಜಾಗೃತಿ ಸಮಾವೇಶ

ತುಮಕೂರು: ಆರ‍್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅತ್ಯಂತ ಹಿಂದುಳಿದಿರುವ ತಿಗಳ ಸಮುದಾಯದಲ್ಲಿ ಜನ ಜಾಗೃತಿ ಉಂಟು ಮಾಡುವ ಉದ್ದೇಶದಿಂದ ಆಗಸ್ಟ್ ೨೬ ರಂದು ಶ್ರೀಮಹಾಲಕ್ಷ್ಮಿ ತಿಗಳ ಮಹಾಸಂಸ್ಥಾನ ಟ್ರಸ್ಟ್ನ ಪೀಠಾಧ್ಯಕ್ಷ ಜ್ಞಾನಾ ನಂದಪುರಿ ಸ್ವಾಮೀಜಿಗಳ ಗುರುವಂದನೆ ಹಾಗೂ ತಿಗಳ ಕ್ಷತ್ರಿಯ ಜಾಗೃತಿ ಸಮಾವೇಶ ವನ್ನು ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗು ಬಿಜೆಪಿ ರಾಜ್ಯ ಹಿಂದುಳಿದ ಮರ‍್ಚಾ ಅಧ್ಯಕ್ಷ ನೆ.ಲ.ನರೇಂದ್ರಬಾಬು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ತಿಗಳರ ವಿದ್ಯಾಭಿವೃದ್ದಿ ಸಂಘ, ತಿಗಳರ ಕ್ಷೇಮಾಭಿವೃದ್ದಿ ಸಂಘ ಹಾಗೂ ತಿಗಳ ಸಮುದಾಯದ ವಿವಿಧ ಸಂಘಟನೆಗಳು ಸೇರಿ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತುಮಕೂರಿನ ಅಮಾನಿಕೆರೆಯ ಗಾಜಿನ ಮನೆಯಲ್ಲಿ ರಾಜ್ಯಮಟ್ಟದ ತಿಗಳ ಕ್ಷತ್ರಿಯ ಜನಜಾಗೃತಿ ಸಮಾವೇಶವನ್ನು ಆಗಸ್ಟ್ ೨೬ ರ ಶುಕ್ರವಾರ ಬೆಳಗ್ಗೆ ೧೦ಕ್ಕೆ ಆಯೋಜಿಸಲಾಗಿದೆ ಎಂದರು.

ತುಮಕೂರು ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರದಲ್ಲಿ ೯ ರಲ್ಲಿ ನಮ್ಮವರೇ ನರ‍್ಣಾಯಕ ಮತದಾರರು, ಹೀಗಿದ್ದರೂ ತುಮಕೂರು ಜಿಲ್ಲೆಯಲ್ಲಿ ನಮ್ಮ ಸಮುದಾಯಕ್ಕೆ ರಾಜಕೀಯ ವಾಗಿ ಅಂತಹ ಒಳ್ಳೆಯ ಸ್ಥಾನಮಾನಗಳು ದೊರೆತ್ತಿಲ್ಲ.ಇದಕ್ಕೆ ಪ್ರಮುಖ ಕಾರಣ ನಮ್ಮಲ್ಲಿ ರಾಜಕೀಯ ಜಾಗೃತಿ ಇಲ್ಲದಿರುವುದು. ಹಾಗಾಗಿ ತಿಗಳ ಸಮುದಾಯದಲ್ಲಿ ಜನಜಾಗೃತಿ ಉಂಟು ಮಾಡುವ ಉದ್ದೇಶ ದಿಂದಲೇ ಸ್ವಾಮಿಜಿಗಳ ಗುರುವಂದನೆಯನ್ನು ನೆಪವಾಗಿಟ್ಟುಕೊಂಡು ಈ ಸಮಾವೇಶ ಆಯೋಜಿಸ ಲಾಗಿದೆ ಎಂದು ತಿಳಿಸಿದರು.

ಆಗಸ್ಟ್ ೨೬ರ ಶುಕ್ರವಾರ ನಡೆಯುವ ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲು ಒಪ್ಪಿದ್ದಾರೆ. ಇವರೊಂದಿಗೆ ಪಾಂಡುಚೇರಿ ರಾಜ್ಯದ ಮುಖ್ಯಮಂತ್ರಿಗಳಾದ ಎನ್.ರಂಗಸ್ವಾಮಿ, ಪಾಂಡುಚೇರಿ ಸರಕಾರದ ಸಭಾಪತಿಗಳಾದ ಆರ್.ಸೆಲ್ವಂ ಇವರುಗಳು ಪಾಲ್ಗೊಳ್ಳಲಿದ್ದಾರೆ.ಇವರೊಂದಿಗೆ ರಾಜ್ಯ ಸರಕಾರದ ವಿವಿಧ ಇಲಾಖೆಗಳ ಮಂತ್ರಿಗಳು,ಶಾಸಕರುಗಳು, ಸಂಸದರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ತಿಗಳ ಜನಾಂಗದ ಮುಖಂಡ ರೇವಣ್ಣ ಸಿದ್ದಯ್ಯ ಮಾತನಾಡಿ,ತಿಗಳರ ಜನಜಾಗೃತಿ ಸಮಾವೇಶ ಪಕ್ಷಾತೀತ ಕರ‍್ಯಕ್ರಮವಾಗಿದೆ. ಹಾಗಾಗಿ ಸಮಾವೇಶಕ್ಕೆ ವಿರೋಧಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರನ್ನು ಆಹ್ವಾನಿಸ ಲಾಗುವುದು.

ಬಿಜೆಪಿ ಸರಕಾರದಲ್ಲಿ ಸಮುದಾಯದ ಬೆಳವಣಿಗೆಗೆ ವಿಶೇಷ ಅನುದಾನವಿಲ್ಲ.ಅಲ್ಲದೆ ನಮ್ಮ ಹಲವು ದಿನಗಳ ಬೇಡಿಕೆಯಾದ ತಿಗಳರ ಅಭಿವೃದ್ದಿ ನಿಗಮ ಸ್ಥಾಪನೆಗೂ ಕ್ರಮ ಕೈಗೊಂಡಿಲ್ಲ. ಅಂದಿನ ಕರ‍್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮುಂದೆ ಈ ಎಲ್ಲಾ ಬೇಡಿಕೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಹಿಂದುಳಿದ ರ‍್ಗದ ಮುಖಂಡ ಎಸ್.ಪಿ.ಚಿದಾನಂದ ಮಾತನಾಡಿ, ಅತ್ಯಂತ ಹಿಂದುಳಿದಿರುವ,ಕೃಷಿಯನ್ನೇ ನಂಬಿ ಬದುಕುತ್ತಿರುವ ಸಮುದಾಯ ರಾಜಕೀಯವಾಗಿ ಜಾಗೃತಿ ಹೊಂದಲು ಹೊರಟಿರುವುದು ಸಂತೋಷದ ವಿಷಯ.ಒಟ್ಟಾರೆ ಜನಸಂಖ್ಯೆಯಲ್ಲಿ ಶೇ೮ರಷ್ಟಿರುವ ಸಮುದಾಯ ಎಲ್ಲಾ ಸೌಲಭ್ಯಗಳಿಂದಲೂ ವಂಚಿತವಾಗಿದೆ. ಈ ಬಗ್ಗೆ ಸರಕಾರಗಳು ಗಮನಹರಿಸಬೇಕಿದೆ ಎಂದರು.

ಜ್ಞಾನಾನಂದಪುರಿ ಸ್ವಾಮೀಜಿ ಮಾತನಾಡಿ, ಭವಿಷ್ಯದಲ್ಲಿ ಸಮುದಾಯವನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸಿನತ್ತ ತೆಗೆದು ಕೊಂಡು ಹೋಗುವ ನಿಟ್ಟಿನಲ್ಲಿ ಆಗಸ್ಟ್ ೨೬ ರಂದು ನಡೆಯುವ ಗುರುವಂದನೆ ಮತ್ತು ಜನ ಜಾಗೃತಿ ಸಮಾವೇಶ ಬಹಳ ಮಹತ್ವ ಪಡೆದುಕೊಂಡಿದೆ.ಗುರುವಂದನೆ ಎಂಬುದು ನಿಮಿತ್ತ ಮಾತ್ರ. ಜನಾಂಗದ ಅಭಿವೃದ್ದಿಯೇ ಮುಖ್ಯ ಉದ್ದೇಶ. ಈ ಹಿನ್ನೆಲೆಯಲ್ಲಿ ಹಿಂದುಳಿದ ಮತ್ತು ದಲಿತ ಮಠಾಧೀಶರ ಒಕ್ಕೂಟದ ಗೌರವಾಧ್ಯಕ್ಷನಾಗಿ ಎಲ್ಲಾ ಮಠಾಧೀಶರು ಗುರುವಂದನೆ ಯಂತಹ ಕರ‍್ಯಕ್ರಮದ ಮೂಲಕ ಸಮುದಾಯ ಸಂಘಟನೆಯಲ್ಲಿ ತೊಡಗಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆಯ ಮಾಜಿ ಅಧ್ಯಕ್ಷೆ ಕಮಲಮ್ಮ,ಮುಖಂಡರಾದ ಸರ‍್ಯಪ್ರಕಾಶ್, ಮಹಾಲಿಂಗಂ, ಹುಚ್ಚೇಗೌಡ, ನಾರಾಯಣಪ್ಪ, ಮಂಜಣ್ಣ,ಬಾಬು ಗುಬ್ಬಿ, ಆನಂತರಾಜು ಎನ್.ಡಿ. ಮತ್ತಿತರರು ಉಪಸ್ಥಿತರಿದ್ದರು.