ತಿಪಟೂರು: ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತವಾಗಿದೆ. ಶುಂಠಿ ಬೆಳೆಗಾರರ ಕ್ಯಾಂಪ್ ಗಳಲ್ಲಿ ಜೀತದಾಳು ಗಳಂತೆ ದುಡಿಸಿಕೊಳ್ಳುತ್ತಿದ್ದ 30 ಜನ ಕೂಲಿ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದ ಬಳಿ ಕೊಳ್ಳೆಗಾಲ, ಮೈಸೂರು, ವಿಜಯಪುರ, ಬಳ್ಳಾರಿ ಮೂಲದ 30 ಜನ ಕೂಲಿ ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಹೊರಗಿನ ಕೆಲ ಪ್ರಭಾವಿಗಳು ರೈತರ ಹೊಲಗಳನ್ನ ಗುತ್ತಿಗೆ ಪಡೆದು ನೂರಾರು ಎಕರೆ ಪ್ರದೇಶದಲ್ಲಿ ಶುಂಠಿ ಬೆಳೆ ಬೆಳೆಯುತ್ತಾರೆ.
ಶುಂಠಿ ಹೊಲದಲ್ಲಿ ಕೆಲಸ ಮಾಡಲು ಹೊರ ಜಿಲ್ಲೆಗಳ ಬಡ ಕೂಲಿ ಕಾರ್ಮಿಕರ ಬಳಕೆ. ಕೂಲಿ ಕಾರ್ಮಿಕರನ್ನ ಒತ್ತೆಯಾಳುಗಳಂತೆ ಇರಿಸಿಕೊಂಡು ಜೀತಕ್ಕೆ ದುಡಿಸಿಕೊಳ್ಳುತ್ತಿರುವ ಶುಂಠಿ ಬೆಳೆಗಾರರು. 2-3 ವರ್ಷಗಳಿಂದ ಕೂಲಿ ಹಣ ನೀಡದೆ ಶೆಡ್ ಗಳಲ್ಲಿ ಇರಿಸಿಕೊಂಡು ದುಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಕೆಲಸ ಮಾಡದಿದ್ದರೆ, ಊರಿಗೆ ಹೋಗಲು ಯತ್ನಿಸಿದ್ರೆ ಕಾವಲುಗಾರರು ದೊಣ್ಣೆಗಳಿಂದ ಹೊಡೆಯುತ್ತಾರೆ. ಕಳೆದ ಎರಡು ವರ್ಷದಿಂದ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನಲ್ಲಿ ದುಡಿಸಿಕೊಳ್ಳಲಾಗಿತ್ತು. ಅಲ್ಲಿಂದ ಬೇರೆ ಬೇರೆ ಶುಂಠಿ ಕ್ಯಾಂಪ್ ಗಳಿಗೆ ಕಾರ್ಮಿಕರನ್ನ ಸಾಗಾಟ ಮಾಡಲಾಗುತ್ತಿದೆ.
ಮಾಲೀಕರುಗಳ ವಿರುದ್ದ ಕೂಲಿ ಕಾರ್ಮಿಕರಿಂದ ಗಂಭೀರ ಆರೋಪ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ, 30 ಜನ ಕೂಲಿ ಕಾರ್ಮಿಕರು ವಶಕ್ಕೆ ಪಡೆದುಷ ಕಳೆದ ರಾತ್ರಿ ಸಮುದಾಯ ಭವನದಲ್ಲಿರಿಸಿ ಕಾರ್ಮಿಕರಿಗೆ ಉಪಚಾರ ನೀಡಿದ್ದಾರೆ.
ಸ್ಥಳಕ್ಕೆ ತಹಶಿಲ್ದಾರ್, ಕಾರ್ಮಿಕ ಅಧಿಕಾರಿ ಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.