Tuesday, 22nd October 2024

ಟ್ಯಾಕ್ಟರ್ ಪಲ್ಟಿ, ವಿದ್ಯಾರ್ಥಿನಿಯರು ಗಂಭೀರ

ಶಿರಸಿ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ಯಾಕ್ಟರ್ ಪಲ್ಟಿ ಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯ 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಳಗಿಯಿಂದ ಕೊಳಗಿಗೆ ಪ್ರವಾಸಕ್ಕೆ ತೆರಳಿದ್ದ ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಾಗಿದ್ದು, ಎರಡು ಟ್ಯಾಕ್ಟರ್ ನಲ್ಲಿ ತೊಂಬತ್ತು ಜನ ವಿದ್ಯಾರ್ಥಿನಿಯರು ತೆರಳಿದ್ದರು. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.