ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರದಿಂದ ಕಲಬುರ್ಗಿ ನಡುವೆ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭಗೊಳ್ಳಲಿದೆ ಅಂತ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಅವರು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ಕಲಬುರಗಿ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಅಂತ ತಿಳಿಸಿದ್ದಾರೆ.
ರೈಲು ಸಂಖ್ಯೆ 06519/06520 ಯಶವಂತಪುರ-ಕಲಬುರಗಿ-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 06519 ಜುಲೈ 13, 2024 ರಂದು (ಶನಿವಾರ) ರಾತ್ರಿ 08:40 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45 ಕ್ಕೆ ಕಲಬುರಗಿ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 06520 ಜುಲೈ 14, 2024 ರಂದು ಬೆಳಿಗ್ಗೆ 09:30 ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 09:40 ಕ್ಕೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.
ಈ ವಿಶೇಷ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರಸ್ತೆ, ರಾಯಚೂರು, ಯಾದಗಿರಿ ಮತ್ತು ಶಹಾಬಾದ್ ಎರಡೂ ದಿಕ್ಕುಗಳಲ್ಲಿ ನಿಲ್ಲಲಿದೆ.
ಈ ವಿಶೇಷ ರೈಲಿನಲ್ಲಿ ಫಸ್ಟ್ ಎಸಿ ಕಮ್ ಎಸಿ 2 ಟೈರ್-1, ಎಸಿ 2 ಟೈರ್-2, ಎಸಿ 3 ಟೈರ್-2, ಸ್ಲೀಪರ್ ಕ್ಲಾಸ್-6, ಜನರಲ್ ಸೆಕೆಂಡ್ ಕ್ಲಾಸ್-6, ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್/ದಿವ್ಯಾಂಗಜನ್ ಕೋಚ್-2 ಸೇರಿದಂತೆ ಒಟ್ಟು 19 ಬೋಗಿಗಳು ಇರಲಿವೆ.