ತಿಪಟೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಿಪಟೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕಲ್ಪತರು ವಿದ್ಯಾಸಂಸ್ಥೆಯು ಫಲಿತಾಂಶದಲ್ಲಿ ಮುನ್ನಡೆ ಸಾಧಿಸಿರುತ್ತದೆ.
ಒಟ್ಟು ಫಲಿತಾಂಶದಲ್ಲಿ ಶೇಕಡ ೮೯ ರಷ್ಟು ಫಲಿತಾಂಶ ಬಂದಿದ್ದು, ವಿಜ್ಞಾನ ವಿಭಾಗದಲ್ಲಿ ೧೮ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ ರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ೦೫ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕಲಾ ವಿಭಾಗದಲ್ಲಿ ೦೫ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿಷಯವಾರು ಅತಿ ಹೆಚ್ಚು ಅಂಕ ಗಳಿಸಿದವರು ಸಿಂಚನ.ಎನ್.ಆರ್. ಲೆಕ್ಕಶಾಸ್ತçದಲ್ಲಿ ೧೦೦ಕ್ಕೆ ೧೦೦, ವ್ಯವಹಾರ ಅಧ್ಯಯನದಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಗಳಿಸಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಕಾವ್ಯ.ಸಿ. ವಿದ್ಯಾರ್ಥಿನಿ ೬೦೦ಕ್ಕೆ ೫೫೭ ಅಂಕಗಳನ್ನು ಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಸಿಂಚನ.ಎನ್.ಆರ್. ೬೦೦ಕ್ಕೆ ೫೭೯ ಅಂಕಗಳನ್ನು ಗಳಿಸಿರುತ್ತಾರೆ. ಕಲಾ ವಿಭಾಗದಲ್ಲಿ ತೇಜಸ್.ಸಿ.ಎಸ್.ಬಿ. ರವರು ೬೦೦ಕ್ಕೆ ೫೪೬ ಅಂಕಗಳನ್ನು ಗಳಿಸಿರುತ್ತಾರೆ.
ಕಲ್ಪತರು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಕಲ್ಪತರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಬೋಧಕ / ಬೋಧಕೇತರರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.