ಗುಬ್ಬಿ: ತಾಲೂಕಿನ ಗಡಿ ಭಾಗಗಳಲ್ಲಿ ಹೆಚ್ಚು ಒತ್ತು ನೀಡಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್ ಆರ್.ಶ್ರೀನಿವಾಸ್ ತಿಳಿಸಿದರು.
ಹಾಗಲವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಮನೆ ಪ್ರಚಾರ ಕೈಗೊಂಡು ಮಾತನಾಡಿ ಹಾಗಲವಾಡಿ ಭಾಗದಲ್ಲಿ ಸಿಸಿ ರಸ್ತೆ, ಒಳಚರಂಡಿ, ಕೊಳವೆಬಾವಿ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ಮಾಡಿಸಿದ್ದೇನೆ. ಕೆರೆ ನೀರಿನ ವಿಚಾರವಾಗಿ ಅನೇಕ ಸಮಸ್ಯೆಗಳು ಇದ್ದವು ಎಲ್ಲವನ್ನು ಸಹ ಸರಿಪಡಿಸಿದ್ದೇನೆ.
ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರು ಹೊಸಬರು ಎಂಬ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಲ್ಲರೂ ಒಟ್ಟಾಗಿ ಪ್ರಚಾರ ಮಾಡು ತ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗ ಬೇಕು ಎಂಬುದು ಎಲ್ಲರ ಮನಸ್ಸಲ್ಲೂ ಇದೆ. ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಈ ಭಾಗದಲ್ಲಿ ಲೀಡ್ ಸಿಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಶಂಕರನಂದ್ ಮಾತನಾಡಿ ಬಿಜೆಪಿ ಸರ್ಕಾರದ ಬೆಲೆ ಏರಿಕೆಯ ಬಿಸಿ ಜನರನ್ನು ತತ್ತರಿಸುವಂತೆ ಮಾಡಿದೆ. ಜನಸಾಮಾನ್ಯರ ಜೀವನ ಕಷ್ಟಕರವಾಗಿದೆ. ದೇಶದ ಭವಿಷ್ಯದ ಹಿತದೃಷ್ಟಿ ಯಿಂದ ಕಾಂಗ್ರೆಸ್ ಸರ್ಕಾರ ಬೇಕಾಗಿದೆ.
ಉತ್ತಮ ಆಡಳಿತ ಕೊಡಲು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ.ವಾಸಣ್ಣನವರು ತಾಲೂಕಿನಲ್ಲಿ ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸಿದಾರೆ. ಅನೇಕ ಅಭಿವೃದ್ಧಿ ಕೆಲಸಗಳು ಕಣ್ಣೆದುರಿಗಿವೆ. ಪ್ರಚಾರ ಕೈಗೊಂಡ ದಿನದಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ತಾಲೂಕಿನಲ್ಲಿ ಕಾಂಗ್ರೆಸ್ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ದೊಡ್ಡಯ್ಯ, ಎಸ್ ಟಿ ಘಟಕದ ಉಪಾಧ್ಯಕ್ಷ ಪುರುಷೋತ್ತಮ್, ಗ್ರಾ ಪಂ ಅಧ್ಯಕ್ಷ ವಿರುಪಾಕ್ಷಯ್ಯ, ಮುಖಂಡರಾದ ಗುರು ರೇಣುಕಾರಾಧ್ಯ, ವಿಜಯ್ ಕುಮಾರ್, ಗಿರಿಯಪ್ಪ, ಪ್ರಕಾಶ್, ಕೋದಂಡ ರಾಮಣ್ಣ,ಸೌಭಾಗ್ಯಮ್ಮ, ಜಯಣ್ಣ, ಭದ್ರಯ್ಯ, ಶಿವಾಜಿ ರಾವ್,ಮಂಜುನಾಥ್, ಮುಂತಾದವರಿದ್ದರು.