Sunday, 15th December 2024

ಪ್ರೆಸ್ ಕ್ಲಬ್ ಉಪಾಧ್ಯಕ್ಷ ಶ್ರೀನಿವಾಸ್ ರೆಡ್ಡಿ ನಿಧನ

ತುಮಕೂರು: ಪ್ರೆಸ್ ಕ್ಲಬ್ ತುಮಕೂರು ಉಪಾಧ್ಯಕ್ಷರು,  ಅಮೋಘ ಟಿವಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮಾಸ್ಟರ್ ಪಿಯು ಕಾಲೇಜಿನ ಸಂಸ್ಥಾಪಕರಾದ ಶ್ರೀನಿವಾಸ್ ರೆಡ್ಡಿ ಅವರು ಅಕಾಲಿಕವಾಗಿ ನಿಧನರಾಗಿರುವುದು ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಸರಳ , ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದ ಶ್ರೀನಿವಾಸ್ ರೆಡ್ಡಿಯವರ ನಿಧನಕ್ಕೆ ಪ್ರೆಸ್ ಕ್ಲಬ್ ತುಮಕೂರು ಪದಾಧಿಕಾರಿಗಳು, ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ ಪತ್ರಕರ್ತರು, ಪತ್ರಿಕಾ ವಿತರಕರು ಸಂತಾಪ ಸೂಚಿಸಿದ್ದಾರೆ.