ತಿಪಟೂರು: ಪ್ರತಿಯೊಂದು ಮಗುವು ಅವರು ವಾಸವಾಗಿರುವ ಸ್ಥಳದಲ್ಲಿಯೇ, ಪ್ರಾರಂಭಿಕ ವಿದ್ಯಾಭ್ಯಾಸವನ್ನು ಕಲಿಯುವಂತಾಗಬೇಕು ಎಂಬುದು ಸರ್ಕಾರದ ಆಶಯವಾಗಿರುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮಕ್ಕೆ ಹೊಸದಾಗಿ ಮಂಜೂರಾದ ಅಂಗನವಾಡಿ ಕೆಂದ್ರ ವನ್ನು ಉದ್ಘಾಟಿಸಿ ಮಾತನಾಡಿ, ತಾಲ್ಲೂಕಿಗೆ ಈ ವರ್ಷದಲ್ಲಿ ಸರ್ಕಾರ ೨೧ ಹೊಸ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಿದ್ದು, ಪ್ರತಿಯೊಬ್ಬ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಂತೆ ಹಾಗೂ ಮಕ್ಕಳಲ್ಲಿ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿ, ಮೊಬೈಲ್ ನಿಂದ ಮಕ್ಕಳನ್ನು ಸಾದ್ಯವಾದಷ್ಟು ದೂರವಿರಿಸುವಂತೆ ಮನವಿ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಾರಿಯಲ್ಲಿರುವ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಹೊನವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಸಾದ್ ರವರು ಉಪಾಧ್ಯಕ್ಷ ಗೌರಮ್ಮರವರು ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳಾರವರು ತಾಲ್ಕೂಕು ಸ್ರ್ತೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ. ಮಂಜುಳ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್. ಗೋಪಾಲಪ್ಪ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ.ಕೆ. ಮೇಲ್ವಿಚಾರಕಿ ಶ್ರೀಮತಿ ಬಿ.ಎನ್. ಪ್ರೇಮಾ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪಿನ ಮಹಿಳೆಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.