ತುಮಕೂರು: ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿ ಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಟೌನ್‌ಹಾಲ್ ವೃತ್ತದಲ್ಲಿ ಭಾನುವಾರ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರನ್ನ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಅವರಿಗೆ ಬಿ’ ಫಾರಂ ಕೊಡದೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಂತಹ ವ್ಯಕ್ತಿತ್ವ ಉಳ್ಳವರು ಶಾಸಕರಾದರೆ ಕ್ಷೇತ್ರದ ಮಹಿಳೆಯರು ಹಗಲು ಹೊತ್ತಿನಲ್ಲಿ ಭಯದಿಂದ ಓಡಾಡುವ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಅಸಮಾ ಧಾನ ಹೊರಹಾಕಿದರು.
ಮಹಿಳೆಯೊಬ್ಬರನ್ನ ಪ್ರಚಾರಕ್ಕೆ ಕರೆಯುವ ನೆಪದಲ್ಲಿ ಗೋವಿಂದರಾಜು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿ ದ್ದಾರೆ. ಅಲ್ಲದೇ ಇವರ ೮ ಆಡಿಯೋಗಳು ಬಿಡುಗಡೆಯಾಗಿದ್ದು, ಜನಪ್ರತಿನಿಧಿಯಾಗಲು ಹೊರಟವರ ಬಣ್ಣ ಬಯಲಾಗಿದೆ. ಈ ಕೂಡಲೇ ಗೋವಿಂದರಾಜು ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ. ನೂರಾರು ಮಹಿಳೆಯರು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಗೋವಿಂದರಾಜು ಅವರ ಮನೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.