Friday, 3rd January 2025

ಶ್ರೀದೇವಿ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಐದನೇ ವರ್ಷದ ಪದವಿ ಪ್ರದಾನ ಸಮಾರಂಭ

ತುಮಕೂರು: ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಮೇ 11ಕ್ಕೆ ವೈದ್ಯ ಪದವಿ ಪಡೆದಿರುವ ಐದನೇ ಬ್ಯಾಚ್‌ನ  ಪದವಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ರಾಮಯ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್.ಜಯರಾಮ್ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.  ಅಧ್ಯಕ್ಷತೆ ಯನ್ನು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ರಮಣ್ ಹುಲಿನಾಯ್ಕರ್, ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕ ಎಂ.ಎಸ್.ಪಾಟೀಲ್, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ಶ್ರೀದೇವಿ ವೈದ್ಯಕೀಯ ಮಹಾ ವಿದ್ಯಾಲಯದ ಉಪಪ್ರಾಂಶುಪಾಲೆ ಡಾ.ರೇಖಾಗುರುಮೂರ್ತಿ, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾ ಲಯದ ಉಪಪ್ರಧಾನ ಆಡಳಿತ ವಿಭಾಗದ ಡಾ.ಹೇಮಂತ್ ರಾಜ್, ಶ್ರೀದೇವಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಮೋಹನ್‌ಕುಮಾರ್, ಶ್ರೀದೇವಿ ಆಸ್ಪತ್ರೆಯ ಉಪಅಧೀಕ್ಷಕ ರಾದ ಡಾ.ಚೆನ್ನಮಲ್ಲಯ್ಯ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ- ಬೋಧಕೇ ತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.