ತುಮಕೂರು: ಸದಾ ಸಮಾಜದ ಹಿತ ಕಾಯುವ ಪೊಲೀಸರ ತನಿಖೆ ಕಾನೂನಿನ ಚೌಕಟ್ಟಿನಲ್ಲಿರಬೇಕು ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗೀತಾ ಕೆ.ಜಿ. ಕಿವಿಮಾತು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.
ಪೊಲೀಸರು ಕಷ್ಟಪಟ್ಟು ಆರೋಪಿಗಳು ಪತ್ತೆಹಚ್ಚುವುದು, ಅಕ್ರಮ ಚಟುವಟಿಕೆಗಳ ಮೇಲೆ ದಾಳಿ ಮಾಡುವ ಕೆಲಸ ಮಾಡು ತ್ತೀರಾ. ಇದಾದ ನಂತರ ಎನ್‌ಡಿಪಿಎಸ್ ಕಾಯ್ದೆ ಯಡಿ ಯಾವ ರೀತಿಯ ತನಿಖೆ ಮಾಡಬೇಕೋ ಆ ರೀತಿಯ ತನಿಖೆಯಾಗಿರುವು ದಿಲ್ಲ. ಹಾಗಾಗಿ ಇದನ್ನು ಅರ್ಥೆÊಸಿಕೊಂಡು ಅಪರಾಧ ಪ್ರಕರಣಗಳ ತನಿಖೆ ಕಾನೂನಿನ ಚೌಕಟ್ಟಿನಲ್ಲಿರುವಂತೆ ನೋಡಿಕೊಳ್ಳಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರ್‌ವಾಡ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸು ತ್ತಿದ್ದೇವೆ. ನಮ್ಮ ದೇಶದ ಉತ್ತರದ ಗಡಿ ಭಾಗವು ವರ್ಷವಿಡೀ ಹಿಮದಿಂದ ಆವೃತ ವಾಗಿರುವ ದುರ್ಗಮ ಪ್ರದೇಶವಾಗಿದೆ.
ಇಂತಹ ಸಂದರ್ಭದಲ್ಲಿ 1959 ರ ಅ. 21 ರಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕರಣ್‌ಸಿಂಗ್ ಎಂಬ ಡಿವೈಎಸ್ಪಿ ರವರ ನಾಯಕ ತ್ವದಲ್ಲಿ ಸಿಆರ್‌ಪಿ ತಂಡದವರು ನಮ್ಮ ದೇಶದ ಗಡಿ ಭಾಗದ ಲಡಾಕ್ ಎಂಬಲ್ಲಿ ಕಾವಲು ಕಾಯುತ್ತಿರುವಾಗ ಚೀನಾ ದೇಶದ ಅಸಂಖ್ಯಾತ ಸೈನಿಕರು ನಮ್ಮ ದೇಶದ ಗಡಿ ಭಾಗದಲ್ಲಿ ಒಳನುಗ್ಗಿದರು. ಅಲ್ಲಿದ್ದ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಕೊನೆಯ ಹನಿ ರಕ್ತ ಇರುವವರೆಗೂ ಅಪ್ರತಿಮವಾಗಿ ಹೋರಾಡಿ ವೀರ ಮರಣ ಹೊಂದಿದರು ಎಂದು ಸ್ಮರಿಸಿದರು.
ಈ ಬಾರಿ ಕರ್ನಾಟಕದಲ್ಲಿ 11 ಮಂದಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು. ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣ ತೆತ್ತಿರುವ 264 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರ ಹೆಸರು ಅವರು ಪಠಿಸಿ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ತಿಪಟೂರು ಉಪವಿಭಾಗದ ಪ್ರೊಭೆಷನರಿ ಅಡಿಷನಲ್ ಎಸ್ಪಿ ಸಿದ್ದಾರ್ಥ ಗೋಯಲ್, ಹೋಂಗಾರ್ಡ್ ಕಮಾಂಡೆ0ಟ್ ಪಾತಣ್ಣ, ನಿವೃತ್ತ ಡಿವೈಎಸ್ಪಿ ಜಗದೀಶ್, ಕೆಎಸ್‌ಆರ್‌ಪಿ ಎಸ್ಪಿ ಸೇರಿದಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.