Thursday, 26th December 2024

ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ರಾಜಣ್ಣ 

ತುಮಕೂರು: ಸಿದ್ದಗಂಗಾ ಮಠಕ್ಕೆ ಮಧುಗಿರಿಯ ನೂತನ ಶಾಸಕ ಕೆ.ಎನ್. ರಾಜಣ್ಣ ಭಾನುವಾರ  ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.
ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ  ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ  ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ  ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಲ್ಲಹಳ್ಳಿ ದೇವರಾಜು, ಪಿ. ಮೂರ್ತಿ, ಎಸ್. ನಾಗಣ್ಣ ಮತ್ತಿತರರು ಉಪಸ್ಥಿತರಿದ್ದರು.