Saturday, 14th December 2024

ಅ.28ರಂದು ಬಿಜೆಪಿ ಜಿಲ್ಲಾಮಟ್ಟದ ಎಸ್.ಟಿ.ಮೋರ್ಚಾ ಸಭೆ

ತುಮಕೂರು: ಪರಿಶಿಷ್ಟ ಪಂಗಡದ ಜಿಲ್ಲಾ ಮಟ್ಟದ ಸಮಾವೇಶವನ್ನು ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಅ.28ರಂದು ಬೆಳಗ್ಗೆ 11 ಕ್ಕೆ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬ್ಬಲ್ ಇಂಜಿನ್ ಸರಕಾರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇಕಡ 3 ರಿಂದ 7ಕ್ಕೆ ಏರಿಸಿದೆ. ಪರಿಶಿಷ್ಟ ಪಂಗಡಕ್ಕೆ ಭರಪೂರ ಸೌಲಭ್ಯಗಳನ್ನು ಕೊಡುಗೆಯಾಗಿ ನೀಡಲಾಗಿದೆ.

ಪರಿಶಿಷ್ಟ ಪಂಗಡದ ಸಮಾವೇಶಕ್ಕೆ ಸಚಿವರಾದ ಬಿ.ಶ್ರೀರಾಮುಲು, ಬಿ.ಸಿ.ನಾಗೇಶ್, ಜೆ.ಸಿ.ಮಾಧು ಸ್ವಾಮಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಮಾಜಿ ಸಚಿವರಾದ ರಮೇಶ್ ಜಾರಕೀಹೊಳಿ, ರಾಜೂಗೌಡ, ಶಿವನಗೌಡ ನಾಯಕ್, ರಾಜ್ಯ ಎಸ್.ಟಿ.ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ರಾಜೇಶ್‌ಗೌಡ, ಮಸಾಲೆ ಜಯರಾಂ, ಚಿದಾನಂದ ಬಿ.ಗೌಡ, ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವರು, ಶಾಸಕರು ಮತ್ತು ವಿಧಾನಸಭೆ, ವಿಧಾನಪರಿಷತ್ ಚುನಾವಣೆಗಳಿಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಇನ್ನು ಮುಂತಾದ ಪ್ರಮುಖರು ಭಾಗವಹಿಸ ಲಿದ್ದಾರೆ.

ಬೈಕ್ ರ‍್ಯಾಲಿ: ಈ ಪರಿಶಿಷ್ಟ ಪಂಗಡದ ಸಭೆಗೆ ಆಗಮಿಸುವ ಪ್ರಮುಖರನ್ನು ತುಮಕೂರಿನ ಕ್ಯಾತಸಂದ್ರದ ಜಾಸ್‌ಟೋಲ್‌ನಿಂದ ಕಾರ್ಯಕ್ರಮದ ಬಾವಿಕಟ್ಟೆ ಕಲ್ಯಾಣ ಮಂಟಪಕ್ಕೆ ಎಸ್.ಟಿ.ಮೋರ್ಚಾದ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಕರೆದು ಕೊಂಡು ಬರಲಿದ್ದಾರೆಂದು ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಶ್ರೀಧರ್, ಕಾರ್ಯದರ್ಶಿ ರಾಜ್‌ಕುಮಾರ್, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ವಿಜಯ್‌ಕುಮಾರ್, ತುಮಕೂರು ಮಹಾನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಜಿಲ್ಲಾ ವಕ್ತಾರ ಕೆ.ಪಿ.ಮಹೇಶ, ಜಿಲ್ಲಾ ಮಾಧ್ಯಮ ಪ್ರಮುಖ್ ಟಿ.ಆರ್.ಸದಾಶಿವಯ್ಯ, ಸಹ ಪ್ರಮುಖ್ ಜೆ.ಜಗದೀಶ್ ಉಪಸ್ಥಿತರಿದ್ದರು.