Friday, 13th December 2024

ಚುನಾವಣೆಗೆ ಸ್ಪರ್ಧಿಸಲು ಗೌರಿಶಂಕರ್ ಗೆ ಅನುಮತಿ ನೀಡಿದ ಸುಪ್ರೀಂ

ತುಮಕೂರು:  ವಿಧಾನಭೆ ಚುನಾವಣೆ ತಯಾರಿಯಲ್ಲಿದ್ದ ತುಮಕೂರು ಗ್ರಾಮಾಂತರ ಜೆಡಿಎಸ್ ಅಭ್ಯರ್ಥಿ ಡಿ.ಸಿ. ಗೌರಿಶಂಕರ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದು ಹೀಗಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ನಿಟ್ಟುಸಿರು ಬಿಟ್ಟಿದ್ದಾರೆ.
೨೦೧೮ರ ಚುನಾವಣೆಯಲ್ಲಿ ಮತದಾರರಿಗೆ ವಿಮಾ ಪಾಲಿಸಿಯ ನಕಲಿ ಬಾಂಡ್ ವಿತರಿಸಿದ ಪ್ರಕರಣ ಸಂಬAಧಿüಸಿದAತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿ ಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು. ಹೀಗಾಗಿ ಕೋರ್ಟ್ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿತ್ತು.
ಹೈಕೋರ್ಟ್ ನೀಡಿದ ಒಂದು ತಿಂಗಳ ಅವಧಿಯಲ್ಲಿ ಗೌರಿಶಂಕರ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ತರಬೇಕಿತ್ತು. ಇಲ್ಲದಿದ್ದರೆ ಅನರ್ಹ ಎಂಬ ಭೀತಿಯಲ್ಲಿರಬೇಕಿತ್ತು.
ಹೀಗಾಗಿ ಗೌರಿ ಶಂಕರ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್, ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಇದರಿಂದ ಗೌರಿ ಶಂಕರ್ ಅವರಿಗೆ ಇದ್ದ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ.
ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.