Sunday, 8th September 2024

Tumkur Dasara: ಮೈಸೂರು ಮಾದರಿಯಲ್ಲಿ ತುಮಕೂರು ದಸರಾ

ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅ. ೧೧ ಹಾಗೂ ೧೨ರಂದು ೨ ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳ ಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವ ಸಭೆ ನಡೆಸಿದ ಅವರು ಕಳೆದ ೩೬ ವರ್ಷಗಳಿಂದ ವಿವಿಧ ಸಂಘಟನೆಗಳನ್ನೊಳಗೊಂಡ ದಸರಾ ಸಮಿತಿಯಿಂದ ನಗರದಲ್ಲಿ ದಸರಾ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಸರಾ ಉತ್ಸವವನ್ನು ಮತ್ತಷ್ಟು ಮೆರಗುಗೊಳಿಸಲು ಜಿಲ್ಲಾಡಳಿತದ ವತಿಯಿಂದ ಈ ವರ್ಷ ಮೊದಲ ಬಾರಿಗೆ ತುಮಕೂರು ದಸರಾ ಉತ್ಸವವನ್ನು ಆಯೋಜಿಸಲು ನಿರ್ಧರಿಸ ಲಾಗಿದ್ದು, ಉತ್ಸವದ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.
ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಕ್ರೀಡೆಯ ಹಿರಿಮೆಯನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ದಸರಾ ಸಾಂಸ್ಕೃತಿಕ ಹಬ್ಬವನ್ನು ಪಕ್ಷಬೇಧವಿಲ್ಲದೆ ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಸೇರಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಒಗ್ಗೂಡಿ ಆಚರಿಸಬೇಕೆಂದರಲ್ಲದೆ ದಸರಾ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಬಹುದಾದ ಧಾರ್ಮಿಕ ಆಚರಣೆ, ಜಂಬೂ ಸವಾರಿ, ಸಾಹಿತ್ಯ-ಕಲೆ-ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ದಸರಾ ಉತ್ಸವದ ಮುಖ್ಯ ವೇದಿಕೆಯನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಯೋಜಿಸಲಾಗಿದ್ದು, ಸಿದ್ಧಪಡಿಸಿರುವ ದಸರಾ ಉತ್ಸವದ ರೂಪು-ರೇಷೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ತುಮಕೂರು ದಸರಾ ಯಶಸ್ವಿಗಾಗಿ ಸ್ವಾಗತ, ಆಹ್ವಾನ ಪತ್ರಿಕೆ ಮತ್ತು ವೇದಿಕೆ ಸಮಿತಿ, ಮೆರವಣಿಗೆ ಸಮಿತಿ(ಸ್ತಬ್ದಚಿತ್ರಗಳ ಮೆರವಣ ಗೆ ಒಳಗೊಂಡಂತೆ), ಗ್ರಾಮೀಣ ದಸರಾ(ರೈತ ದಸರಾ) ಸಮಿತಿ, ಕ್ರೀಡಾ ದಸರಾ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ದೀಪಾಲಂಕಾರ ಸಮಿತಿ, ಕವಿಗೋಷ್ಠಿ ದಸರಾ ಸಮಿತಿ, ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ, ಆಹಾರ ಮೇಳ ಸಮಿತಿ,  ಸ್ವಚ್ಛತೆ ಮತ್ತು ವ್ಯವಸ್ಥೆ ಸಮಿತಿ ಸೇರಿದಂತೆ ಇತರೆ ಸಮಿತಿಗಳನ್ನು ರಚಿಸಲಾಗಿದ್ದು, ಅಕ್ಟೋಬರ್ ೧೧ ಹಾಗೂ ೧೨ರಂದು ಹಮ್ಮಿಕೊಂಡಿರುವ ಮಿನಿ ಮ್ಯಾರಥಾನ್, ಮಹಿಳಾ ದಸರಾ, ಯುವ ದಸರಾ, ಮಕ್ಕಳ ದಸರಾ, ವಸ್ತುಪ್ರದರ್ಶನ, ಕವಿಗೋಷ್ಠಿ, ತೆಪ್ಪೋತ್ಸವ, ಸ್ತಬ್ಧಚಿತ್ರ ಮೆರವಣ ಗೆ, ಪಂಜಿನ ಕವಾಯಿತು, ಕ್ರೀಡಾ ಸ್ಪರ್ಧೆ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ,   ರೈತ ದಸರಾ, ದೀಪಾಲಂಕಾರ, ಆಹಾರ ಮೇಳ, ಸ್ವಚ್ಛತೆಗೆ ಸಂಬAಧಿಸಿದAತೆ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ ೧೫ರಂದು ದಸರಾ ಉತ್ಸವದ ಲಾಂಛನ(ಲೋಗೋ)ವನ್ನು ಬಿಡುಗಡೆ ಮಾಡಲಾಗುವುದೆಂದು ಮಾಹಿತಿ ನೀಡಿದರು.
ತುಮಕೂರು ದಸರಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನೃತ್ಯರೂಪಕ, ಚಿತ್ರನಟ-ನಟಿ, ಪ್ರಸಿದ್ಧ ಗಾಯಕ, ಜಿಲ್ಲೆಯ ಹಿನ್ನೆಲೆಯುಳ್ಳ ಕಲಾವಿದರನ್ನು ಕರೆಸುವ ಬಗ್ಗೆ ಸಭೆಯಲ್ಲಿ  ಚರ್ಚಿಸಲಾಯಿತು.
ಸಭೆಯಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್ ಹಾಗೂ ಸುರೇಶ್ ಗೌಡ,   ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿ ಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!