ಚಿಕ್ಕನಾಯಕನಹಳ್ಳಿ: ರಾಜ್ಯದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣದ ಹಿನ್ನೆಲೆಯಲ್ಲಿ ಗುರುವಾರ ಆಚರಿಸಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಾಂಕೇತಿಕವಾಗಿ ತಹಸೀಲ್ದಾರ್’ರವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲು ತಾಲ್ಲೂಕು ಆಡಳಿತ ತೀರ್ಮಾನಿಸಿದೆ ಎಂದು ತಹಸೀಲ್ದಾರ್ ಕೆ ಪುರಂದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿಯಂದು ಉದ್ದೇಶಿಲಾಗಿದ್ದ ಮೆರವಣಿಗೆ, ವೇದಿಕೆ ಕಾರ್ಯಕ್ರಮ ಇತ್ಯಾದಿ ಕಲಾ-ಸಾಂಸ್ಕೃತಿಕ ಚಟುವಟಿಕೆಗಳನ್ನು ಮುಂದೂಡಲಾಗಿದೆ.
ಮಿಕ್ಕಂತೆ ಕಾರ್ಯಕ್ರಮ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರ ಘನ ಉಪಸ್ಥಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.