Monday, 23rd September 2024

Tumkur News: ಗುಣಮಟ್ಟದ ಸಲಕರಣೆ ವಿತರಿಸಲು ಆಗ್ರಹ 

ತುಮಕೂರು: ಜನರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಗುಣಮಟ್ಟದ ಸಲಕರಣೆ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಹಾಗೂ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಸಂಘದ ಪದಾಧಿಕಾರಿಗಳನ್ನೊಂಳಗೊಂಡ ಗ್ರಾಮ ಆಡಳಿತಾಧಿಕಾರಿಗಳ ನಿಯೋಗ ತೆರಳಿ ಜಿಲ್ಲಾಧಿಕಾರಿಗಳಿಗೆ,ತಹಶೀಲ್ದಾರರಿಗೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಿಗೆ  ಬೇಡಿಕೆಗಳ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್.ದೇವರಾಜು,ಕಂದಾಯ ಇಲಾಖೆಯಿಂದ ಬೆಳೆ ಸಮೀಕ್ಷೆ, ಬಗರ್ ಹುಕ್ಕಂ ಭೂಮಿ ಗುರುತು ಮಾಡುವುದು ಸೇರಿದಂತೆ ಸುಮಾರು 17 ಮೊಬೈಲ್ ಅಫ್‌ಗಳನ್ನು ಸೃಜಿಸಿ, ಕೆಲಸ ಮಾಡು ವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ. ಆದರೆ ಈ ಮೊಬೈಲ್ ಅಫ್‌ಗಳ ಅಪರೇಷನ್ ಮಾಡಲು ಅಗತ್ಯವಿರುವ ಅಧುನಿಕ ತಂತ್ರಜ್ಞಾನ ಒಳಗೊಂಡ ಮೊಬೈಲ್ ಆಗಲಿ, ಅದಕ್ಕೆ ಬೇಕಾದ ಇಂಟರನೆಟ್ ಸೌಲಭ್ಯ, ಪ್ರಿಂಟರ್ ಯಾವ ಪರಿಕರ ಗಳನ್ನು ನೀಡದೆ,ಕೆಲಸ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.

ಮೇಲಧಿಕಾರಿಗಳ ಒತ್ತಡ 

ಮೇಲಧಿಕಾರಿಗಳ  ಒತ್ತಡದಿಂದ ವಿಎಒ ಗಳಲ್ಲಿ ದೈಹಿಕ ಮತ್ತು ಮಾನಸಿಕ ಒತ್ತಡಗಳು ಹೆಚ್ಚಾಗಿ,ಸಾವು,ನೋವುಗಳು ಸಂಭವಿಸಿವೆ.ಅಲ್ಲದೆ ಕೆಲಸದ ಸಂದರ್ಭದಲ್ಲಿ ಹಲ್ಲೆಗೆ ಒಳಗಾಗುತ್ತಿದ್ದಾರೆ.ಆದ್ದರಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸು ತ್ತಿರುವ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಚಿತ್ರದುರ್ಗದಲ್ಲಿ ನಡೆದ ಸಂಘದ ರಾಜ್ಯ ಮಂಡಳಿ ತೀರ್ಮಾನದಂತೆ ಅಧಾರ್ ಸೀಡ್,ಲ್ಯಾಂಟ್ ಬೀಟ್,ಬಗರ್  ಹುಕುಂ, ಹಕ್ಕುಪತ್ರ,ನಮೂನೆ1-5 ರ ವೆಬ್‌ಅಪ್ಲಿಕೇಷನ್, ಹಾಗೂ ಪೌತಿ ಖಾತೆ ಆಂದೋಲನ ಅಫ್‌ಗಳ ಕಾರ್ಯಗಳನ್ನು ಸ್ಥಗೀತಗೊಳಿಸುತ್ತಿದ್ದೇವೆ ಎಂದು ದೇವರಾಜು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಿಂದ ವಂಚಿತರಾಗುತ್ತಿದ್ದು, ಸುಮಾರು 30 ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ರಾಜ್ಯದಲ್ಲಿ 1196 ಗ್ರೆಡ್ 1 ಗ್ರಾಮಪಂಚಾಯಿತಿ ಹಾಗೂ 304 ಕಸಬಾ ಹೋಬಳಿ ವೃತ್ತಗಳಲ್ಲಿ ಇರುವ ಗ್ರೆಡ್-01 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೇಲ್ದರ್ಜೆಗೇರಿಸಿ, ರಾಜಸ್ವ ನಿರೀಕ್ಷಕರು, ಪ್ರಥಮದರ್ಜೆ ಸಹಾಯಕರಿಗೆ ಪದೋನ್ನತ್ತಿ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಈ ವೇಳೆ ಗೌರವಾಧ್ಯಕ್ಷ ಎನ್.ರವಿಕುಮಾರ್,ಪ್ರಧಾನ ಕಾರ್ಯದರ್ಶಿ ಭಕ್ತವತ್ಸಲ, ಖಜಾಂಚಿ ಮೋಹನ್,ಉಪಾಧ್ಯಕ್ಷ ಯಮನೂರು,ಜಿಲ್ಲಾ ಸಹಕಾರ್ಯದರ್ಶಿ ರಾಘವೇಂದ್ರಸ್ವಾಮಿ,ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಎಚ್.ಸಿ.ಹೇಮ ಸೇರಿದಂತೆ ಪದಾಧಿಕಾರಿಗಳು,ನಿರ್ದೇಶಕರುಗಳು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಸಂಘದವತಿಯಿಂದ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: Tumkur News: ಕೋರ ಗ್ರಾಪಂ ಸದಸ್ಯರಿಂದ ಅಕ್ರಮವಾಗಿ ನಿವೇಶನ ಹಂಚಿಕೆ